September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

ನಾವೂರು: ಸರಕಾರಿ ಪ್ರೌಢ ಶಾಲಾ ಮಕ್ಕಳ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇತ್ತೀಚೆಗೆ ಜರಗಿತು.
ಕಾರ್ಯಕ್ರಮವನ್ನು ನಾವೂರಿನ ಪ್ರಸಿದ್ಧ ವೈದ್ಯ ಡಾ| ಪ್ರದೀಪ್‌ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಶಿಸ್ತು ಮತ್ತು ಉತ್ತಮ ನಾಯಕತ್ವ ಮತ್ತು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಲು ವಿದ್ಯಾರ್ಥಿಗಳಿಗೆ ತಿಳಿಸಿ ಶುಭ ಹಾರೈಸಿದರು.


ಹೊಸದಾಗಿ ಆಯ್ಕೆಯಾದ ಶಾಲಾ ವಿದ್ಯಾರ್ಥಿಗಳ ನಾಯಕ ವಿಖ್ಯಾತ್ ೧೦ನೇ ತರಗತಿ, ಉಪನಾಯಕ ಮುಹಮ್ಮದ್ ಮುಬಶೀರ್ ಶಾಕ್ಮಲ್ ೯ನೇ ತರಗತಿ ಹಾಗೂ ಮಂತ್ರಿ ಮಂಡಲದ ಸದಸ್ಯರು ಪ್ರಮಾಣವಚನವನ್ನು ಸ್ವೀಕರಿಸಿದರು. ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಎಂ. ಪ್ರತಿಜ್ಞೆಯನ್ನು ಬೋಧಿಸಿದರು.


ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಉಮೇಶ್ ಪ್ರಭು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯದ ದೃತಿ ೮ನೇ ತರಗತಿ ಕಾರ್ಯಕ್ರಮ ನಿರೂಪಿಸಿ, ತನುಶ್ರೀ ೯ನೇ ಸ್ವಾಗತಿಸಿ, ಶಾಲಾ ಉಪನಾಯಕ ಧನ್ಯವಾದವಿತ್ತರು.

Related posts

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya
error: Content is protected !!