ಬೆಳ್ತಂಗಡಿ: ಶ್ರಮಿಕ ಸೇವಾ ಟ್ರಸ್ಟ್ ಬೆಳ್ತಂಗಡಿ,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಮೂಡಬಿದ್ರೆ ವಿದ್ಯಾಗಿರಿ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ನಡೆದ ಉದ್ಯೋಗ ಮಾಹಿತಿ ಶಿಬಿರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಜು.15 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಕಲಾಭವನದಲ್ಲಿ ಚಾಲನೆ ನೀಡಿದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಅವರು ಉದ್ಯೋಗ ಮಾಹಿತಿ ನೀಡಿ ಉದ್ಯೋಗಾಕಾಂಕ್ಷಿಗಳಿಗೆ ಮಾರ್ಗದಶನ ನೀಡಿದರು.
ಮಾಹಿತಿ ಕಾರ್ಯಾಗಾರದಲ್ಲಿ ನೂರಾರು ವಿದ್ಯಾರ್ಥಿಗಳು, ಶಾಲಾ ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.











