24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಶವ ಹೂತು ಹಾಕಿದ ದೂರು ಪ್ರಕರಣ: ಎಸ್ ಐಟಿ ರಚನೆಗೆ ಮುಖ್ಯ ಮಂತ್ರಿಗಳಿಗೆ ಮನವಿ

ಬೆಂಗಳೂರು: ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಮುಖ್ಯಮಂತ್ರಿ ಯವರ ಆಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ವಕೀಲರ ನಿಯೋಗವು ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಸಿ.ಎಸ್‌. ದ್ವಾರಕಾನಾಥ್ ಅವರು, “ಇವತ್ತು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ, ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದಂತಹ ಅತ್ಯಾಚಾರ, ಹತ್ಯೆ ಮತ್ತು ಹೆಣಗಳನ್ನು ಹೂತು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದೇವೆ.

ಈಗಾಗಲೇ ಅಲ್ಲಿ ತನಿಖೆ ನಡೆಯುತ್ತಿದ್ದು ಒಬ್ಬರು ದೂರು ಕೂಡ ನೀಡಿದ್ದಾರೆ. ಆ ವ್ಯಕ್ತಿಗೆ ಸೂಕ್ತ ರಕ್ಷಣೆ ನೀಡಬೇಕಾಗಿದೆ. ಅಲ್ಲದೆ, ಆ ವ್ಯಕ್ತಿ ಹೇಳುವ ಜಾಗದಲ್ಲಿ ಪರಿಶೀಲನೆ ನಡೆಸಬೇಕಾಗುತ್ತದೆ. ಹೀಗಾಗಿ ಈ ಪ್ರಕರಣವನ್ನು ಎಸ್‌ಐಟಿಗೆ ನೀಡಬೇಕು ಎಂದು ಮನವಿ ಮಾಡಿದ್ದೇವೆ” ಎಂದು ತಿಳಿಸಿದರು.

Related posts

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya
error: Content is protected !!