23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 23ನೇ ವಾರ್ಷಿಕ ಸಭೆಯು ಜು. 15 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಸಂಘಟನೆ ಬಲಪಡಿಸಬೇಕಾದರೆ ಸದಸ್ಯರು ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಿಕೆ ಅಗತ್ಯವಾಗಿದ್ದು ಸಾಮಾಜಿಕ ಚಟುವಟಿಕೆಗಳನ್ನು ಕೈಗೂಡಿಸಿಕೊಂಡು ಬೆಳ್ತಂಗಡಿ ವಲಯವು ಉತ್ತಮ ಹೆಸರನ್ನು ಗಳಿಸಿಕೊಂಡಿದೆ ಎoದರು.

ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಕೋಶಾಧಿಕಾರಿ ನವೀನ್ ರೈ ಪಂಜಳ, ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಸಂಚಾಲಕ ಕರುಣಾಕರ ಕಾನoಗಿ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ , ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸಂತ್ ಶರ್ಮ ಉಜಿರೆ, ವಲಯದ ಸ್ಥಾಪಕ ಅಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಬೆಳ್ತಂಗಡಿ, ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್. ಪ್ರಸಾದ್ ಗೇರುಕಟ್ಟೆ , ಕೋಶಾಧಿಕಾರಿ ಹರೀಶ್ ಕೊಳ್ತಿಗೆ ಉಪಸ್ಥಿತರಿದ್ದರು.

ಮಹಾಸಭೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ ಬಹುಮಾನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮುoದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು. ಕೆ ವಸಂತ್ ಶರ್ಮ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಪ್ರಸಾದ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಹರೀಶ್ ಕೊಳ್ತಿಗೆ ಲೆಕ್ಕಪತ್ರ ಮಂಡನೆ ಮಾಡಿದರು. ಜಗದೀಶ್ ಜೈನ್ ಹಾಗೂ ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು.

ವರದಿ : ಮನು ಮದ್ದಡ್ಕ

Related posts

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya
error: Content is protected !!