September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಕಾಡಾನೆಗಳು ದಾಳಿ ನಡೆಸಿ ಹಾನಿ ಮಾಡುತ್ತಿರುವ ಬಗ್ಗೆ ತಾನು ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರೂ ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕರು ಸಂತ್ರಸ್ತ ಕೃಷಿಕರ ನೋವನ್ನು ಅಂದು ಸದನದಲ್ಲಿ ತಾನು ವ್ಯಕ್ತಪಡಿಸಿರುವುದನ್ನು ಬೆಳ್ತಂಗಡಿ ಕಾಂಗ್ರೆಸ್ ಗರು ಅಪಹಾಸ್ಯ ಮಾಡಿದ್ದರು. ಆದರೆ ಇದರ ಗಂಭೀರತೆಗೆ ಓರ್ವ ನಾಗರೀಕನನ್ನು ಕಳೆದುಕೊಂಡದ್ದು ತನಗೆ ಅತೀವ ನೋವನ್ನುಂಟು ಮಾಡಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತು ಆನೆ ದಾಳಿ ಮಾಡುವ ಕೃಷಿ ಪ್ರದೇಶ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸೂಕ್ತ ತಡೆಬೇಲಿ ನಿರ್ಮಾಣ ಮಾಡಲು ಕ್ರಮ ಕೈಗೊಂಡು ಮೃತ ಬಾಲಕೃಷ್ಣ ಶೆಟ್ಟಿಯವರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಬಿಡುಗಡೆ ಮಾಡುವಂತೆ ಪತ್ರಿಕಾ ಪ್ರಕಟಣೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related posts

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಶ್ರಯದಲ್ಲಿ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ

Suddi Udaya
error: Content is protected !!