September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

ಕಾಯರ್ತಡ್ಕ : ಸರಕಾರಿ ಪ್ರೌಢಶಾಲೆ ಇಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣಾ ಸಮಿತಿ ವತಿಯಿಂದ ಅರಿವು ಕಾರ್ಯಕ್ರಮವನ್ನು ಜು.14 ರಂದು ಆಯೋಜಿಸಲಾಗಿತ್ತು.

ಜಿಲ್ಲಾ ಮಕ್ಕಳ ಹಕ್ಕುಗಳ ಪ್ರಾಧಿಕಾರದ ಸೂಚನೆಯಂತೆ ಈ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರದಲ್ಲಿ ‘ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ’ ಮತ್ತು ‘ಹದಿ ಹರೆಯದ ಸಮಸ್ಯೆಗಳು’ ಈ ವಿಷಯದ ಬಗ್ಗೆ ಮಾಹಿತಿ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಅರೋಗ್ಯ ಇಲಾಖೆಯ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹೆಣ್ಣು ಮಕ್ಕಳಿಗೆ ಸೂಕ್ತ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಇವರು ಮಕ್ಕಳಿಗೆ ಕೆಲವು ಚಟುವಟಿಕೆಗಳನ್ನು ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ಹೆಣ್ಣು ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿರುವುದು ಕಾರ್ಯಕ್ರಮದ ಮುಖ್ಯ ಅಂಗವಾಗಿತ್ತು.

ಕಾರ್ಯಕ್ರಮ ಆರಂಭದಲ್ಲಿ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಸಂಪನ್ಮೂಲಗಳು ವ್ಯಕ್ತಿಗಳನ್ನು ಪರಿಚಯಿಸಿ ಪ್ರಾಸ್ತವಿಕವಾಗಿ ಮಾತಾಡಿದರು. ಕಾರ್ಯಕ್ರಮದ ನೋಡಲ್ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಪೈ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಕೊಕ್ಕಡ ವಲಯದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ರೇಖಾ ಭಾಗವಹಿಸಿದ್ದರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!