September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಕೊಕ್ಕಡ : ಸೌತಡ್ಕದ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರೊಂದಿಗೆ ಸಮಾಲೋಚಿಸಿ, ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರವನ್ನು ಒದಗಿಸುವ ಬಗ್ಗೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು ಹಾಗೂ ಕುಟುಂಬದ ಸದಸ್ಯರೋರ್ವರಿಗೆ ಸರಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು. ಅರಣ್ಯ ಇಲಾಖೆಯ ವತಿಯಿಂದ ಪರಿಹಾರ ಸೌಲಭ್ಯಗಳನ್ನು ತುರ್ತಾಗಿ ಒದಗಿಸುವಂತೆ ಜಿಲ್ಲಾ ಅರಣ್ಯ ಅಧಿಕಾರಿಯವರಿಗೆ ಅಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ನೆಲ್ಯಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ ಬೆಳ್ತಂಗಡಿ ತಾಲೂಕಿನ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಹಾಗೂ ವಿಶ್ವ ಹಿಂದೂ ಪರಿಷತ್ ನ ಮುಖಂಡರಾದ ನವೀನ್ ನೆರಿಯ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Related posts

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya
error: Content is protected !!