ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಕೊಕ್ಕಡ : ಕೊಕ್ಕಡ ಆನೆ ದಾಳಿಯಿಂದ ಮೃತ ಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಕುಟುಂಬಕ್ಕೆ ರೂ.20 ಲಕ್ಷ ಪರಿಹಾರ, 5 ವರ್ಷ ತಿಂಗಳಿಗೆ 4 ಸಾವಿರದಂತೆ ಮಾಸಿಕ ಸಹಾಯಧನ ನೀಡುವಂತೆ, ಮೃತರ ಪತ್ನಿ ಸೌತಡ್ಕ ದೇವಸ್ಥಾನದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸಕ್ಕೆ ಇದ್ದು ಪರ್ಮನೆಂಟ್ ಮಾಡುವ ಬಗ್ಗೆ, ಮೃತರ ಮಕ್ಕಳಲ್ಲಿ ಒಬ್ಬರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ನೀಡುವ ಬಗ್ಗೆ ಮಾತನಾಡಿದರು. ಅಲ್ಲದೆ ಆನೆ ಕ್ಯಾಂಪ್ ಮಾಡುವ ಬಗ್ಗೆ, ಆನೆಗಳು ಜನನಿಬಿಡ ಪ್ರದೇಶಕ್ಕೆ ಬರದಂತೆ ಅರಣ್ಯದಂಚಿಗೆ ರೈಲ್ವೆ ಹಳಿಯಂತ ಬೇಲಿ ನಿರ್ಮಿಸುವ ಬಗ್ಗೆ ಪ್ರಯತ್ನಿಸುವುದಾಗಿ ಹೇಳಿದರು. ಈಗಾಗಲೇ ದುಬಾರೆ ಆನೆ ಶಿಬಿರದಿಂದ ಬಂದ ಪರಿಣಿತರಿಂದ ಆನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಪ್ರಾರಂಭವಾಗಿದೆ ಎಂದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಮಾಜಿ ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್, ಗ್ರಾಪಂ ಅಧ್ಯಕ್ಷೆ ಶ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ವಿಠಲ ಕುರ್ಲೆ, ಪ್ರಶಾಂತ್ ಪೂವಾಜೆ, ರಂಜು ಕೊಕ್ಕಡ, ರಾಘವ ಭಂಡಾರಿ, ಉದ್ಯಮಿ ಬಾಲಕೃಷ್ಣ ನೈಮಿಷ, ಪಕ್ಷದ ಕಾರ್ಯಕರ್ತರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ್, ಪ್ರೊಫೆಷನರಿ ಅರಣ್ಯಾಧಿಕಾರಿ ಹಸ್ತಾ ಶೆಟ್ಟಿ, ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!