23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ ‘ಆಟಿಡೊಂಜಿ ದಿನ’ವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಖ್ಯಾತ ತುಳುರಂಗಭೂಮಿ ಕಲಾವಿದ ವಿ ಎಸ್ ಶಶಿಧರ್ ದೇವಾಡಿಗ ನೆಲ್ಲಿಕಾರು ಅವರು ಆಗಮಿಸಿ ಆಟಿ ತಿಂಗಳ ವೈಜ್ಞಾನಿಕ ಹಿನ್ನಲೆ, ಮಹತ್ವ, ಹಾಗೂ ಸಂಪ್ರದಾಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಗೀತಾ ಮಾತನಾಡಿ ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ನೆನಪುಗಳನ್ನು ಹಂಚಿಕೊಂಡರು.
ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿ, ಸಾಂಸ್ಕೃತಿಕ ಸಂಘದ ಮುಖ್ಯಸ್ಥ ಪದ್ಮನಾಭ ಬಿ ಕೆ ಸ್ವಾಗತಿಸಿ, ಇಂಗ್ಲಿಷ್ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ವಂದಿಸಿದರು.
ತುಳುನಾಡಿನ ಸಂಸ್ಕೃತಿ ಪರಂಪರೆಗಳನ್ನು ಬಿಂಬಿಸುವ ತುಳು ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ಆಟಿ ತಿಂಗಳ ತಿನಿಸುಗಳ ಪ್ರದರ್ಶನ ಹಾಗೂ ಆಟಿಯ ಭೋಜನವು ಕಾರ್ಯಕ್ರಮದ ವಿಶೇಷವಾಗಿತ್ತು.

Related posts

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya
error: Content is protected !!