March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಪುಂಜಾಲಕಟ್ಟೆ: ಸುಮಾರು 65 ವರ್ಷದ ಹನುಮಂತಪ್ಪ ಎಂಬ ಹೆಸರಿನ ಅಪರಿಚಿತ ವ್ಯಕ್ತಿಯು ತಣ್ಣೀರುಪಂತ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಜು.16ರಂದು ನಿಧನರಾಗಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು 6 ವಾರಗಳ ಹಿಂದೆ ಉಪ್ಪಿನಂಗಡಿ ಬಸ್ಸು ನಿಲ್ದಾಣದ ಬಳಿ ಕಾಣಸಿಕ್ಕ ಹನುಮಂತಪ್ಪ ಎಂಬ ಹೆಸರಿನ ಸುಮಾರು 65 ವರ್ಷ ಪ್ರಾಯದ ವ್ಯಕ್ತಿ ಜು.16 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಚಿಕಿತ್ಸೆಯ ಬಗ್ಗೆ 108 ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದ್ದವರು ಜು.16 ರಂದು ರಾತ್ರಿ ಮಂಗಳೂರು ಜಿಲ್ಲಾ ಸರಕಾರಿ ವೆನಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಗದಗ, ಬಾಗಲಕೋಟೆ ನಿವಾಸಿ ಎಂದು ಗುರುತಿಸಲಾಗಿದೆ.

ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶೀತಲಿಕರಣ ಶವಾಗಾರದಲ್ಲಿ ಇರಿಸಲಾಗಿದೆ. ಆದುದರಿಂದ ಮೃತ ವ್ಯಕ್ತಿಯ ವಾರೀಸುದಾರರ ಪತ್ತಯಾದ್ದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಸಂಪರ್ಕಕ್ಕಾಗಿ 8277986416, 8277986417, 9480805336

Related posts

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya
error: Content is protected !!