September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

ಕಾಯರ್ತಡ್ಕ : ಇಲ್ಲಿಯ ಸರಕಾರಿ ಪ್ರೌಢಶಾಲೆಯದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮವನ್ನು ಜು.19 ರಂದು ನಡೆಸಲಾಯಿತು. ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಸೂಚನೆಯಂತೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಯುವ ನ್ಯಾಯವಾದಿ ವಿನಯ್ ಎಂ ಜಾರ್ಜ್ ಇವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಂವಿಧಾನದಲ್ಲಿ ಮಕ್ಕಳಿಗೆ ನೀಡಿರುವ ಹಕ್ಕುಗಳ ಬಗ್ಗೆ ವಿವರಿಸಿದ ಅವರು ಬಾಲ ನ್ಯಾಯ ಕಾಯಿದೆ -2025, ಫೋಸ್ಕೋ ಕಾಯಿದೆ, ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯಿದೆ, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ ಹಾಗೂ ಬಾಲ್ಯ ವಿವಾಹ ನಿಷೇದ ಇವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸ್ವಾಗತಗೈದ ಮುಖ್ಯಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ನೋಡಲ್ ಶಿಕ್ಷಕ ಆನಂದ ಆಪ್ಟೆ ಇವರು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಮಾಹಿತಿ ನೀಡಿದರು. ಹಿರಿಯ ಶಿಕ್ಷಕ ವಿನಾಯಕ ಜೋಶಿ ಧನ್ಯವಾದ ಸಲ್ಲಿಸಿದರು.

Related posts

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೆಯರ್ ವಿತರಣೆ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!