25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜು ಪ್ರಾಂಶುಪಾಲರಾದ ಸುಕುಮಾರ್ ಜೈನ್ ಅಧ್ಯಕ್ಷತೆಯಲ್ಲಿ ಜು.19 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಜರುಗಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ದೀಪ ಪ್ರಜ್ವಲಿಸಿ ಮಾತನಾಡಿ ಬೆಳ್ತಂಗಡಿ ಸರಕಾರಿ ಕಾಲೇಜು ಶಿಸ್ತಿಗೆ ಆಧ್ಯಾತೆಯನ್ನು ನೀಡುತ್ತಿದ್ದು, ಅನುಭವವುಳ್ಳ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ನಿವೃತ್ತ ಎಸ್ ಪಿ ಪೀತಾ0ಬರ ಹೇರಾಜೆ, ಸುವರ್ಣ ಮಹೋತ್ಸವದ ಅಧ್ಯಕ್ಷರು, ವಕೀಲರು ಧನಂಜಯ್ ರಾವ್, ಹಿರಿಯ ಉಪನ್ಯಾಸಕರಾದ ಆನಂದ, ಸುವರ್ಣ ಕುಮಾರಿ, ವಿದ್ಯಾರ್ಥಿ ಸಂಘದ ನಾಯಕರುಗಳು ಉಪಸ್ಥಿತರಿದ್ದರು.

18 ಕನ್ನಡ ಶತಕ ಸಾಧಕರು, 4 ಇತಿಹಾಸ ಶತಕ ಸಾಧಕರು, 1 ಗಣಿತ ಶಾಸ್ತ್ರ ಹಾಗೂ 1 ವ್ಯವಹಾರ ಶತಕ ಸಾಧಕರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ ಗಣೇಶ್ & ಅಮೃತ ರಶ್ಮಿ ರವರಿಗೆ ಶತಕ ಪ್ರೇರಣಾ ಪುರಸ್ಕಾರ, ಆನಂದ & ಮೋಹನ್ ರವರಿಗೆ ಶತಕ ಪೋಷಕರು ಪುರಸ್ಕಾರ, ದೀಪಶ್ರೀ ರವರಿಗೆ ಶತಕ ಪ್ರೇರಕಿ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಪ್ರಾಂಶುಪಾಲ ಸುಕುಮಾರ್ ಜೈನ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿನಿಯರಾದ ಕೀರ್ತನಾ ಸ್ವಾಗತಿಸಿ, ಮನ್ವಿತಾ ನಿರೂಪಿಸಿದರು. ಪ್ಲೇವಿಟಾ ವಂದಿಸಿದರು.

Related posts

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!