37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು. 19ರಂದು ರಸ್ತೆ ಸಂಚಾರ ನಿಯಮ ಹಾಗೂ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ವಹಿಸಿದ್ದರು. ಈ ಸಂದರ್ಭದಲ್ಲಿ ಮೊದಲಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ತಿಳಿ ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆದ ಅರ್ಜುನ್ ಎಚ್. ಕೆ. ಇವರು ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಿ ಯಾವ ರೀತಿ ಮುಂಜಾಗ್ರತಾ ಕ್ರಮವನ್ನು ವಹಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಸಹ ಶಿಕ್ಷಕ ರವಿಕುಮಾರ್ ಶ್ರೀಮತಿ ಫಿಲೋಮಿನಾ ಹಾಗೂ ಇತರರು ಉಪಸ್ಥಿತರಿದ್ದರು. ಸಹ ಶಿಕ್ಷಕಿಯಾದ ಶ್ರೀಮತಿ ನಿಶಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದಗಳು ಅರ್ಪಿಸಿದರು.

Related posts

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya
error: Content is protected !!