ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜು. 19 ರಂದು ಒಕ್ಕೂಟದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ನೆರವೇರಿಸಿದರು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಉಮಾ ಆರ್. ರಾವ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ನಿಕಟಪೂರ್ವ ಅಧ್ಯಕ್ಷ ಲ। ದೇವದಾಸ್ ಎಲ್. ಶೆಟ್ಟಿ, ಜೆ.ಸಿ.ಐ. ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷೆ ಶ್ರೀಮತಿ ಆಶಾ ಪ್ರಶಾಂತ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಶಾಂತ ಬಂಗೇರ, ಗೌರವಾಧ್ಯಕ್ಷೆ ಶ್ರೀಮತಿ ಸವಿತಾ ಜಯದೇವ್, ಜತೆ ಕಾರ್ಯದರ್ಶಿ ಶ್ರೀಮತಿ ಗೀತಾ ಜಯವರ್ವ, ಕೋಶಾಧಿಕಾರಿ ಶ್ರೀಮತಿ ಯಶೋಧ ಲಾಯಿಲ, ಉಪಾಧ್ಯಕ್ಷೆ ಶ್ರೀಮತಿ ಉಷಾ ಲಕ್ಷ್ಮಣ ಗೌಡ , ಮಹಾಪೋಷಕರು ಶ್ರೀಮತಿ ಲೋಕೇಶ್ವರಿ ವಿನಯಚಂದ್ರ , ಹಾಗೂ ಕಾರ್‍ಯಕಾರಿ ಸಮಿತಿಯ ಸದಸ್ಯರು, ಸಾಂತ್ವಾನ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.











