23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಧಮ೯ಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮೇಳದಲ್ಲಿ ಹಿರಿಯ ಕಲಾವಿದರಾಗಿದ್ದ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92 ವ) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ನಿಧನ ಹೊಂದಿದರು.

ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ ವೇಷಗಳನ್ನು ಮಾಡಿ ಭಾವಾಭಿನಯ ಮತ್ತು ನೃತ್ಯ ಲಾಲಿತ್ಯಗಳಿಂದ ವೈವಿಧ್ಯಮಯ ವೇಷಗಳಲ್ಲಿ ಮೆರೆದ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟರು. ಪುತ್ತೂರು ಕೃಷ್ಣಭಟ್ಟರಿಂದ ತೆಂಕುತಿಟ್ಟಿನ ಅಭ್ಯಾಸ ಮಾಡಿದ್ದ ವೆಂಕಟರಮಣ ಭಟ್ಟರು, ಬಳಿಕ ಮೂಲ್ಕಿ ಮೇಳ, ಸುರತ್ಕಲ್ ಮೇಳ, ಸೌಕೂರು ಮೇಳ, ಧರ್ಮಸ್ಥಳದ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ನಡೆಸಿದ್ದರು. ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ಸುಭದ್ರೆ, ದೌಪದಿ, ಮೀನಾಕ್ಷಿ, ಸ್ವಯಂಪ್ರಭೆಯಂತಹ ಪಾತ್ರಗಳಿಗೆ ತನ್ನದೇ ಆದ ಮೆರುಗು ನೀಡಿದ್ದ ಪಾತಾಳರು ಬೇಲೂರಿನ ಶಿಲಾ ಬಾಲಿಕೆಯರ ಅಂಗಭಂಗಿಗಳನ್ನು ಬೇಲೂರಿಗೆ ಹೋಗಿ ಸ್ವತಃ ಅಭ್ಯಸಿಸಿ ಯಕ್ಷಗಾನದಲ್ಲಿ ಅಳವಡಿಸಿದವರು.

ಪಾತಾಳ ವೆಂಕಟರಮಣ ಭಟ್ಟರಿಗೆ ಚೆನ್ನೈನ ಹಿಂದೂಧರ್ಮ ಸಂಘವು ಮಣಿವಿಳಾ ಬಿರುದು ನೀಡಿ ಗೌರವಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ, ವಿಟ್ಲ ಗೋಪಾಲಕೃಷ್ಣ ಭಟ್ ಪ್ರತಿಷ್ಟಾನ ಪ್ರಶಸ್ತಿ, ವಿದ್ಯಾಮಾನ್ಯ ಪ್ರಶಸ್ತಿ, ಯಕ್ಷ ಕಲಾನಿಧಿ ಪ್ರಶಸ್ತಿ, ಅಗರಿ ಪ್ರಶಸ್ತಿ, ಕರಾವಳಿ ಯಕ್ಷಗಾನ ಮಂಡಳಿ, ಬಿ.ಬಿ.ಶೆಟ್ಟಿ ಪ್ರಶಸ್ತಿ, ಪಟ್ಟಾಜೆ ಪ್ರಶಸ್ತಿ, ದೇರಾಜೆ ಪ್ರಶಸ್ತಿ, ಕಲ್ಕೂರ ಪ್ರಶಸ್ತಿ ಸೇರಿ ಹಲವು ಗೌರವಗಳು ಸಂದಿದೆ.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya
error: Content is protected !!