September 6, 2026
ಶಾಲಾ ಕಾಲೇಜು

ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭ

ವೇಣೂರು: ಸರಕಾರಿ ಪ್ರೌಢ ಶಾಲೆಯ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭವು ಜು.19ರಂದು ನಡೆಯಿತು.

ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಕ್ರಮ ಉದ್ಘಾಟಿಸಿ ಗ್ರಾಮೀಣ ಪ್ರದೇಶದ ವೇಣೂರು ಪ್ರೌಢ ಶಾಲೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ.ತಾನು ಕಲಿತ ಶಾಲೆ ಮತ್ತು ಗುರುಗಳನ್ನು ವಿದ್ಯಾರ್ಥಿಗಳು ಮರೆಯದೆ ಒಳ್ಳೆಯ ಉದ್ಯೋಗ ಪಡೆದು ಸಮಾಜಕ್ಕೆ ಶಕ್ತಿಯಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ವೆಂಕಟೇಶ್ ತುಳುಪುಳೆ ಅವರು ವಹಿಸಿದ್ದರು.

ವೇದಿಕೆಯಲ್ಲಿ ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆಯ ಅಧ್ಯಕ್ಷ ರೊ. ದುರ್ಗಾದಾಸ್ ಶೆಟ್ಟಿ, ಕಾರ್ಯದರ್ಶಿ ರೊ. ಟೀನಾ ಡಿಕೋಸ್, ಲಯನ್ಸ್‌ ಕ್ಲಬ್ ವೇಣೂರಿನ ಕಾರ್ಯದರ್ಶಿ ಲ. ಜಯರಾಮ ಹೆಗ್ಡೆ,ಹಿರಿಯ ಶಿಕ್ಷಕಿ ಸುಕನ್ಯ ಪ್ರಭು, ನೆಲ್ಸನ್ ಹೆರಾಲ್ಡ್ ಕ್ಯಾಸ್ಟಲಿನೊ,ವಿದ್ಯಾರ್ಥಿ ನಾಯಕಿ ಕುಮಾರಿ ಶಬರಿ, ಉಪನಾಯಕ ನರಸಿಂಹ ಕಾಮತ್,ವಿರೋಧ ಪಕ್ಷದ ನಾಯಕಿ ಧೃತಿ ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಸಿದ್ದ ಕಟ್ಟೆ, ಲಯನ್ಸ್ ಕ್ಲಬ್ ವೇಣೂರು, ಎನ್.ಎಸ್.ಎಸ್ ಘಟಕ ಮತ್ತು ಮತದಾನ ಸಾಕ್ಷರತಾ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನೆರವೇರಿತು.

ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ರವೀಂದ್ರ ಕೆ. ಸ್ವಾಗತಿಸಿದರು.ಶಿಕ್ಷಕಿ ಸುಶೀಲಾ ಜಿ. ಕಾರ್ಯಕ್ರಮದ ನಿರೂಪಣೆ ಮಾಡಿದರು. ಶಿಕ್ಷಕಿ ಪ್ರೇಮ ಕೆ. ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
error: Content is protected !!