March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

ಉಜಿರೆ : “ಯಾವ ವಿಶ್ವವಿದ್ಯಾಲಯವೂ ಮಾತನಾಡುವುದನ್ನು ಕಲಿಸುವುದಿಲ್ಲ. ಅದು ನಿರಂತರ ಅಭ್ಯಾಸದಿಂದ ಮಾತ್ರ ಬರಲು ಸಾಧ್ಯ. ಆ ಕೌಶಲ್ಯವನ್ನು ಬಳಸಿ ಪ್ರತಿಯೊಬ್ಬರೂ ತಮ್ಮ ಐಡೆಂಟಿಟಿಯನ್ನ ಬೆಳೆಸಿಕೊಳ್ಳಬೇಕು” ಎಂದು ರೇಡಿಯೋ ಸಾರಂಗ್‌ನ ಮುಖ್ಯ ಕಾರ್ಯಕ್ರಮ ನಿರ್ಮಾಪಕ ಆರ್‌ಜೆ ಅಭಿಷೇಕ್ ಶೆಟ್ಟಿ ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆ ಇದರ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ, “ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡಷ್ಟು ಅವರ ವ್ಯಕ್ತಿತ್ವ ವಿಕಸನ ಸಾಧ್ಯ. ಇದಕ್ಕಾಗಿ ಬೇಕಾದಂತೆ ವಿದ್ಯಾರ್ಥಿ ಸಂಘಗಳು ರೂಪುಗೊಳ್ಳಬೇಕು. ತಮ್ಮ ಕೌಶಲ್ಯಗಳನ್ನು ಪ್ರಸ್ತುತಪಡಿಸಲು ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಬಳಸಬೇಕು” ಎಂದರು.

ಸಹಾಯಕ ಪ್ರಾಧ್ಯಾಪಕ ಇಂದುಧರ ಕಿಣಿ ಲೂಮೋಸ್ ವಿದ್ಯಾರ್ಥಿ ಸಂಘದ 2024-25ನೇ ಸಾಲಿನ ವಾರ್ಷಿಕ ವರದಿ ವಾಚಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಲುಮೋಸ್ ವಿದ್ಯಾರ್ಥಿ ಸಂಘದ 2025-26 ನೇ ಸಾಲಿನ ಅಧ್ಯಕ್ಷರಾಗಿ ಅಂಕಿತಾ, ಕಾರ್ಯದರ್ಶಿಯಾಗಿ ಪವನ್ ಕುಮಾರ್, ದ್ವಿತೀಯ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿ ಪ್ರತಿನಿಧಿಯಾಗಿ ಆಶಿಕಾ ಮತ್ತು ಲುಬ್ನಾ ಮರಿಯಮ್ ಪ್ರಮಾಣವಚನ ಸ್ವೀಕರಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿನಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ಅಕ್ಷಿತಾ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಸಹಾಯಕ ಪ್ರಾಧ್ಯಾಕಪರಾದ ಅಶ್ವಿನಿ ಜೈನ್ ಸ್ವಾಗತಿಸಿ, ತೇಜಸ್ವಿನಿ ಆರ್ ಎಸ್ ವಂದಿಸಿದರು.

Related posts

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya
error: Content is protected !!