22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತೆಂಕಕಾರಂದೂರು ಇದರ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಸಮಿತಿಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ‌.ಕೃಷ್ಣ ಸಂಪಿಗೆತ್ತಾಯ ಇವರ ಸಮ್ಮುಖದಲ್ಲಿ ದೇವಸ್ಥಾನದ ವಠಾರದಲ್ಲಿ ಜು. 20 ರಂದು ರಚಿಸಲಾಯಿತು.

ವರ ಮಹಾಲಕ್ಷ್ಮಿ ಸಮಿತಿಯ ನೂತನ ಅಧ್ಯಕ್ಷರಾಗಿ ರೂಪಲತಾ ರಮಾನಂದ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿಯಾಗಿ ಚೈತ್ರ ಪ್ರವೀಣ್, ಹಾಗೂ ರೂಪ ಶುಭಕರ ಬದ್ಯಾರು, ಜೊತೆ ಕಾರ್ಯದರ್ಶಿಯಾಗಿ
ಗೀತಾ‌ ಬದ್ಯಾರು, ಕೋಶಾಧಿಕಾರಿಯಾಗಿ ಪ್ರಮೀಳಾ ವಿದ್ಯಾನಂದ, ಉಪಾಧ್ಯಕ್ಷರಾಗಿ ಲೀಲಾವತಿ ಜಗದೀಶ್ ಕೆಮ್ಮಟೆ ಆಯ್ಕೆಯಾದರು.

ವರ ಮಹಾಲಕ್ಷ್ಮಿ ಪೂಜೆಯು‌ ಆ.8 ರಂದು ಬೆಳಿಗ್ಗೆ 9ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya
error: Content is protected !!