September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಉಜಿರೆ: ಇಲ್ಲಿಯ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದ ಜು. 20ರಂದು ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ರತ್ನಮಾನಸದ ನಿಲಯ ಪಾಲಕರಾದ ಯತೀಶ್ ಕೆ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ರತ್ನ ಮಾನಸದ ಹಿರಿಯ ವಿದ್ಯಾರ್ಥಿ ಉದ್ಯಮಿ ಜಗದೀಶ ಪ್ರಸಾದ್ ಇವರು ಭತ್ತದ ಕೃಷಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು.

ನಿಲಯದ ವಿದ್ಯಾರ್ಥಿಗಳೊಂದಿಗೆ ಉಜಿರೆಯ ಎಸ್ ಡಿ ಎಂ ಕಾಲೇಜು(ಸ್ವಾಯತ್ತ) ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ, ನಂತರ ಕೆಸರು ಗದ್ದೆಯಲ್ಲಿ ಆಟವಾಡಿ ಸಂಭ್ರಮಿಸಿದರು.
ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಶಕುಂತಲಾ. ಬಿ, ಸಹಾಯಕ ಪ್ರಾಧ್ಯಾಪಕರಾದ ಭವ್ಯ ನಾಯಕ್ ಮತ್ತು ಮಂಜುಶ್ರೀ ಉಪಸ್ಥಿತರಿದ್ದರು. ಸಾಮಾಜಿಕ ಕಾರ್ಯಕರ್ತ ಶಿವಪ್ರಸಾದ್ ಮಲೆಬೆಟ್ಟು , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಭಾಕರ ಹೆಗ್ಡೆ , ನಿಲಯದ ಶಿಕ್ಷಕರಾದ ರವಿಚಂದ್ರ ಹಾಗೂ ಉದಯರಾಜ್ ಮತ್ತು ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.

Related posts

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!