September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ.

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ” ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ವಕ್ತಾರರು ಕೆ. ಪಾರ್ಶ್ವನಾಥ್ ಜೈನ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ ಸಂಭ್ರಮದ ಓಣಂ ಆಚರಣೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya
error: Content is protected !!