March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

ಬಂದಾರು: ಇಲ್ಲಿಯ ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಜು. 21 ರಂದು ನಡೆಯಿತು.

ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಮಾತನಾಡಿ ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಮಾತನಾಡುತ್ತಾ ಅವರು ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವುದರ ಮೂಲಕ ಶಾಲೆಯನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ. ಉತ್ತಮ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ದೊರೆಯುತ್ತಿದ್ದು, ಶಾಲೆಗಳನ್ನು ಉಳಿಸಿಕೊಳ್ಳುವತ್ತ ಊರಿನವರು ಗಮನ ಹರಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತ. ಕೆ, ಕುರುಡಂಗೆ, ಭಾರತಿ ಕೋಡಿಯೆಲ್ , ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಾಬಲ ಗೌಡ, ಕೃಷ್ಣಯ್ಯ ಆಚಾರ್ಯ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಹೊನ್ನಪ್ಪ ಗೌಡ, ಡೀಕಯ್ಯ ಗೌಡ, ಪೆರ್ಲ- ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ದಾಮೋದರ ಗೌಡ ಕಾಡoಡ, ಪದಾಧಿಕಾರಿಗಳು- ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು ಹಾಗೂ ಊರಿನ ನಾಗರಿಕರು ಪಾಲ್ಗೊಂಡಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya
error: Content is protected !!