ಕಳೆಂಜ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 9 ನೇ ಜನಸ್ಪಂದನ ಸಭೆ ಜು.22 ರಂದು ಕಾಯರ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ್ ಎಚ್ , ಕಳೆಂಜ ಸಿಎ ಬ್ಯಾಂಕ್ ಅಧ್ಯಕ್ಷ ಧನಂಜಯ, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ಪ್ರಬೋಷನರಿ ಎಸಿಎಫ್ ಹಸ್ತ ಶೆಟ್ಟಿ , ಸಹಿತ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ತಾ.ಪಂ.ಇಓ ಭವಾನಿ ಶಂಕರ್ ಎನ್. ಸ್ವಾಗತಿಸಿದರು.











