September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಪುದುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂರುದ್ರ ಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ, ರೂ.151630 ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಯಶೋಧರ ಕೆ ರವರು ರುದ್ರಭೂಮಿ ಸಮಿತಿಯ ಅಧ್ಯಕ್ಷ ಬೊಮ್ಮಣ್ಣ ಗೌಡ ಹಾಗೂ ಪದಾಧಿಕಾರಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಬಸಪ್ಪ ಗೌಡ, ಪುದುವೆಟ್ಟು ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಪೂರ್ಣಾಕ್ಷ ಬಿ, ಜನಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷ ದೇವನಗೌಡ ಬೊಲ್ಮಾನರು, ರುದ್ರಭೂಮಿ ಸಮಿತಿಯ ಪದಾಧಿಕಾರಿಗಳಾದ ಸಜೀವ್ ಹಾಗೂ ಚಿತ್ತರಂಜನ್ ಜೈನ್, ಪುದುವೆಟ್ಟು ಒಕ್ಕೂಟದ ಅಧ್ಯಕ್ಷ ಶಶಿಧರ ಮೀಯಾರು, ಒಕ್ಕೂಟದ ಅಧ್ಯಕ್ಷ ಅಪೂರ್ವ ಜೈನ್, ಕೆಮ್ಮಟೆ ಒಕ್ಕೂಟದ ಅಧ್ಯಕ್ಷ ಗಣೇಶ್ ಸಾಲಿಯಾನ್ ಹಾಗೂ ಪದಾಧಿಕಾರಿಗಳು, ಪುದುವೆಟ್ಟು ಶೌರ್ಯ ಘಟಕದ ಸ್ವಯಂಸೇವಕರು, ಅಶೋಕ್ ಟ್ರೇಡರ್ಸ್ ಮಾಲಕರಾದ ಅಶೋಕ್, ವಲಯ ಮೇಲ್ವಿಚಾರಕ ರವೀಂದ್ರ ಬಿ, ಸೇವಾ ಪ್ರತಿನಿಧಿಗಳಾದ ಆನಂದ್ ಹಾಗೂ ಚೈತ್ರರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!