March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ ಸಮಿತಿಯ ಕಛೇರಿಯಲ್ಲಿ ನಡೆಯಿತು. ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು.

ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು, ಚರ್ಚಿಸಲಾಯಿತು. ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2025ರ ಜೂನ್‌ ತಿಂಗಳಲ್ಲಿ 25468 ಕುಟುಂಬಗಳಿಗೆ 1,34,67,129/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2025ರ ಜೂನ್‌ ತಿಂಗಳಲ್ಲಿ 44296 ಕುಟುಂಬಗಳಿಗೆ 2,61,61,458/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 118,14,75,244/- ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯಡಿ ಪ್ರಕೃತ 56355 ಫಲಾನುಭವಿಗಳಿದ್ದು, ಆಗಸ್ಟ್-2023‌ ರಿಂದ ಈವರೆಗೆ 218,36,64,000/-ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.
ಅನ್ನ ಭಾಗ್ಯ ಯೋಜನೆಯಡಿ ಜುಲೈ ತಿಂಗಳಲ್ಲಿ 49303 ಪಡಿತರ ಚೀಟಿದಾರರಿಗೆ 9922 ಕ್ವಿಂಟಾಲ್‌ ಅಕ್ಕಿಯನ್ನು ವಿತರಿಸಲಾಗಿದೆ. ಪ್ರತೀ ಕೆ.ಜಿ.ಗೆ ರೂಪಾಯಿ 34.00 ರಂತೆ 55,49,55,540.00ರೂಗಳ ಅನುದಾನವು ಆಗಸ್ಟ್-2023‌ ರಿಂದ ಈವರೆಗೆ ತಾಲೂಕಿನ ಪಡಿತರ ಚೀಟಿದಾರರಿಗೆ ದೊರೆತಿರುವುದಾಗಿ ಅಧಿಕಾರಿಗಳು ಸಭೆಗೆ ವಿವರ ನೀಡಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 6072 ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 815 ಅಭ್ಯರ್ಥಿಗಳಿಗೆ 2025ರ ಮೇ ತಿಂಗಳಲ್ಲಿ 22,81,500.00ರೂ.ಗಳನ್ನು ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು, ಆಗಸ್ಟ್-2023‌ ರಿಂದ 2025ರ ಮೇ ತಿಂಗಳವರೆಗೆ 1,65,40,500.00 ರೂ.ಗಳನ್ನು ಸರ್ಕಾರವು ಫಲಾನುಭವಿಗಳ ಖಾತೆಗೆ ಜಮಾ ಮಾಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.

ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2025ರ ಜೂನ್ ತಿಂಗಳಲ್ಲಿ 600449 ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023‌ ರಿಂದ ಈವರೆಗೆ 15531595 ಪ್ರಯಾಣಿಕರು ಪ್ರಯಾಣಿಸಿದ್ದು, 71,24,70,465/-ರೂ. ಬಿಡುಗಡೆಯಾಗಿರುವುದಾಗಿ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರು, ಇಲಾಖಾಧಿಕಾರಿಗಳು, ತಾಲೂಕು ಪಂಚಾಯತ್‌ ಅಧೀಕ್ಷಕರಾದ ಡಿ.ಪ್ರಶಾಂತ್‌ ಮತ್ತು ನೋಡೆಲ್‌ ಅಧಿಕಾರಿಯಾದ ಹೆರಾಲ್ಡ್‌ ಸ್ವಿಕ್ವೇರಾ ಉಪಸ್ಥಿತರಿದ್ದರು.

Related posts

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
error: Content is protected !!