September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

ಕನ್ಯಾಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ನಡೆಸಿಕೊಡುವ ಯಕ್ಷದ್ರುವ ಯಕ್ಷ ಶಿಕ್ಷಣ ಉಚಿತ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆಯು ಜು.22 ರಂದು ಗಣ್ಯರು ದೀಪಬೆಳಗಿಸುವ ಮೂಲಕ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಸಲಹೆಗಾರರಾದ ಭುಜಬಲಿ ಡಿ ಶುಭ ಹಾರೈಸಿದರು, ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ರವರು ಪಟ್ಲ ಫೌಂಡೇಶನ್ ಕಾರ್ಯ ಚಟುವಟಿಕೆ ಕುರಿತು ವಿವರಿಸಿದರು. ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ನಂದ , ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ, ಶಾಲಾ ಮುಖ್ಯೋಪಾಧ್ಯಾಯನಿ ಪುಷ್ಪಾ ಎನ್ , ಕನ್ಯಾಡಿಯ ಯುವ ಉದ್ಯಮಿ ಪದ್ಮಪ್ರಸಾದ್ ಜೈನ್ , ಹಿರಿಯ ವಿದ್ಯಾರ್ಥಿ ಸುದರ್ಶನ್ ಕನ್ಯಾಡಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು , ಶಾಲಾ ಅಧ್ಯಾಪಕ ವೃಂದ, ಮಕ್ಕಳು ಉಪಸ್ಥಿತರಿದ್ದರು.

ಯಕ್ಷ ಗುರುಗಳಾದ ಅರುಣ್ ಕುಮಾರ್ ನಾಟ್ಯ ತರಬೇತಿಯನ್ನು ಪ್ರಾರಂಭಿಸಿದರು. ಶಾಲೆಯ ಹಿರಿಯ ವಿದ್ಯಾರ್ಥಿ ಯಕ್ಷಗಾನ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಹಿರಿಯ ಕಲಾವಿದ ಸಂತೋಷ್ ಕುಮಾರ್ ಡಿ ಯವರಿಗೆ ಗೌರವಾರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಪಾರಂಪರಿಕ ಶೈಲಿಯ ಖ್ಯಾತ ಭಾಗವತರಲ್ಲಿ ಒಬ್ಬರಾದ ಮಹೇಶ್ ಕನ್ಯಾಡಿ ಉಪಸ್ಥಿತರಿದ್ದರು.
ಪಟ್ಲ ಫೌಂಡೇಶನ್ ಯಕ್ಷ ಶಿಕ್ಷಣಕ್ಕೆ ಕನ್ಯಾಡಿ ಶಾಲೆಯನ್ನು ಆಯ್ಕೆ ಮಾಡಿದ್ದಕ್ಕಾಗಿ ಶಾಲಾ ಅಧ್ಯಕ್ಷರು ಹಾಗೂ ಮುಖ್ಯೋಪಾಧ್ಯಾಯರು ತುಂಬು ಹೃದಯದಿಂದ ಧನ್ಯವಾದಗಳನ್ನು ಅರ್ಪಿಸಿದರು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಶ್ರೀಮತಿ ಜಯಶ್ರೀ ಧನ್ಯವಾದವನ್ನು ಮತ್ತು ಶ್ರೀಮತಿ ಶ್ವೇತಕುಮಾರಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya
error: Content is protected !!