23.5 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಮಂಗಳೂರು :ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜಿನಲ್ಲಿ ಗಣಕ ವಿಜ್ಞಾನ ಶೈಕ್ಷಣಿಕ ಕಾರ್ಯಗಾರ


ಬೆಳ್ತಂಗಡಿ :ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ. ಕ. ಮಂಗಳೂರು ಇದರ ಉಪನಿರ್ದೇಶಕರಾದ ಶ್ರೀಮತಿ ರಾಜೇಶ್ವರಿ ಹೆಚ್. ಹೆಚ್ ಹೇಳಿದರು.


ಅವರು ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ)ಮಂಗಳೂರು ಮತ್ತು ದ. ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಸಂಘ ಹಾಗು ಮಂಗಳೂರು ಬೆಂದೂರು ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಗಣಕ ವಿಜ್ಞಾನ ವಿಷಯದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತ, ಇಂದಿನ ಕಾಲದಲ್ಲಿ ತಂತ್ರಜ್ಞಾನವಿಲ್ಲದೇ ಯಾವುದೇ ಕೆಲಸ ಅಸಾಧ್ಯ. ಮುಂದಿನ ಭವಿಷ್ಯ ತಂತ್ರಜ್ಞಾನದಿಂದಲೇ ಕೂಡಿರುತ್ತದೆ ಎಂದರು.
ಮಂಗಳೂರು ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನೋರಿನ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ದ. ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಜಯಾನಂದ ಸುವರ್ಣ ಮುಖ್ಯ ಅಥಿತಿಯಾಗಿದ್ದರು. ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಗುರುದತ್ತ ಪುರುತಗೇರಿ, ಶ್ರೀನಿವಾಸ್ ಎ, ಶ್ರೀಮತಿ ಮಂಗಲಾ ಶೆಣೈ, ಹರೀಶ್ ಆರ್, ಶ್ರೀಮತಿ ಶರಣ್ಯ ಆಳ್ವ, ಪ್ರದೀಪ್ ಕೆ ವೈ ಕಾರ್ಯಗಾರವನ್ನು ನಡೆಸಿಕೊಟ್ಟರು. ಗಣಕ ವಿಜ್ಞಾನ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶ್ರೀಧರ್ ಪುತ್ರನ್, ಉಪಾಧ್ಯಕ್ಷ ಮನೋಜ್ ಪಿ ಎಸ್, ಕೋಶಾಧಿಕಾರಿ ಸುಮಾ ಹೆಗ್ಡೆ ಉಪಸ್ಥಿತರಿದ್ದರು.
ಕಾರ್ಯದರ್ಶಿ ಶ್ರೀಮತಿ ನಿವೇದಿತಾ ವಿ ನಾಯಕ್ ಸ್ವಾಗತಿಸಿ. ತಾಲೂಕು ಪ್ರತಿನಿಧಿ ಶ್ರೀಮತಿ ರಮ್ಯಾ ವಂದಿಸಿ. ಬೆಳ್ತಂಗಡಿ ತಾಲೂಕು ಪ್ರತಿನಿಧಿ ಸುಧೀರ್ ಕೆ ಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಎಸ್.ಡಿ.ಎಂ ಪಿಯು ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya
error: Content is protected !!