September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಕೇಂದ್ರ ಖಿಲರ್ ಜುಮ್ಮಾ ಮಸೀದಿ ಇದರ ವಾರ್ಷಿಕ ಮಹಾಸಭೆಯು ಜು. 25 ರಂದು ಜುಮ್ಮಾ ನಮಾಝಿನ ಬಳಿಕ ಖಿಲರ್ ಜುಮ್ಮಾ ಮಸೀದಿಯ ಮದರಸ ಹಾಲ್ ನಲ್ಲಿ ಜಮಾ’ಅತ್ ಖತೀಬರಾದ ಹನೀಫ್ ಫೈಝಿಯವರು ದುವಾ ಮೂಲಕ ನಡೆಯಿತು.

ಪ್ರಧಾನ ಕಾರ್ಯದರ್ಶಿ ರಝಾಕ್ ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಅಧ್ಯಕ್ಷ ಬಿ ಎ ನಝೀರ್ ರವರು ಕಳೆದ ಸಾಲಿನ ಅವಧಿಯಲ್ಲಿ ನಡೆದ ಮಸೀದಿಯ ಅಭಿವೃದ್ಧಿ ಕಾರ್ಯವನ್ನು ವಿವರಿಸಿದರು. ಮಹಮ್ಮದ್ ಬಿ ಎಚ್ ಗೌರವ ಅಧ್ಯಕ್ಷತೆಯಲ್ಲಿ ಹಳೆಯ ಸಮಿತಿಯನ್ನು ಬರ್ಕಾಸುಗೊಳಿಸಿ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ರಝಾಕ್ ಕೊಡಿಸಭೆ, ಉಪಾಧ್ಯಕ್ಷರಾಗಿ ಬಿ.ಶೇಕುಂಞ, ಬದ್ರುದ್ದಿನ್ ಮಟ್ಲ, ಜೊತೆ ಕಾರ್ಯದರ್ಶಿಗಳಾಗಿ ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಯಾಗಿ ಫೈಝಲ್ ಐ.ಜೆ ಆಯ್ಕೆಯಾದರು.

ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ ಎಚ್ ಮಹಮ್ಮದ್, ಗೌರವ ಸಲಹೆಗಾರರಾಗಿ ನಝೀರ್ ಬಿ. ಎ ರವರು ಆಯ್ಕೆಯಾದರು . ಈ ಸಂದರ್ಭದಲ್ಲಿ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಸಭೆಯನ್ನು ಕಾರ್ಯದರ್ಶಿ ರಝಾಕ್ ಕೊಡಿಸಭೆ ಸ್ವಾಗತಿಸಿ, ಯಾಕೂಬ್ ಮಾಸ್ಟರ್ ನಿರೂಪಿಸಿದರು.

Related posts

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ಸೆ. 5ರಂದು ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ರವರಿಗೆ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ ಪ್ರದಾನ

Suddi Udaya
error: Content is protected !!