ಉಜಿರೆ : ಶ್ರೀ ಧ.ಮ. ಇಂಜಿನಿಯರಿಂಗ್ ಕಾಲೇಜು (ಎಸ್‌ಡಿಎಂಐಟಿ), ಉಜಿರೆಯಲ್ಲಿ ಜುಲೈ 19 ರಂದು ಕೊಯಮತ್ತೂರಿನ ಎನ್‌ಜಿಐ (NGI) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಚ್.ಎನ್. ನಾಗರಾಜ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ (NEP) ಮತ್ತು NAAC ನೂತನ ಬೈನರಿ ಮೌಲ್ಯಮಾಪನ ವ್ಯವಸ್ಥೆಯ ಕುರಿತಾಗಿ ಉಪನ್ಯಾಸ ನೀಡಿ ಉಪನ್ಯಾಸಕರೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಹಾಗೂ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್.ಎನ್. ಕಾಕತ್ಕರ್ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ. ಅಶೋಕ್ ಕುಮಾರ್ ಅವರು ಸ್ವಾಗತ ಕೋರಿದರು. ಮೆಕಾನಿಕಾಲ್ ವಿಭಾಗ ಮುಖ್ಯಸ್ಥ ಡಾ. ಗಿರೀಶ್ ಕುಮಾರ್ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಐಟಿ ಉಜಿರೆ, ಎಸ್‌ಡಿಎಂ ಪಿಜಿ ಸೆಂಟರ್ ಹಾಗೂ ಎಸ್‌ಡಿಎಂ ಪದವಿ ಕಾಲೇಜಿನ ಅಧ್ಯಾಪಕರು ಪಾಲ್ಗೊಂಡರು.











