September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

ಉಜಿರೆ : ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜು (ಎಸ್‌ಡಿಎಂಐಟಿ), ಉಜಿರೆಯಲ್ಲಿ ಜುಲೈ 19 ರಂದು ಕೊಯಮತ್ತೂರಿನ ಎನ್‌ಜಿಐ (NGI) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಚ್.ಎನ್. ನಾಗರಾಜ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ (NEP) ಮತ್ತು NAAC ನೂತನ ಬೈನರಿ ಮೌಲ್ಯಮಾಪನ ವ್ಯವಸ್ಥೆಯ ಕುರಿತಾಗಿ ಉಪನ್ಯಾಸ ನೀಡಿ ಉಪನ್ಯಾಸಕರೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಹಾಗೂ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್.ಎನ್. ಕಾಕತ್ಕರ್ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ. ಅಶೋಕ್ ಕುಮಾರ್ ಅವರು  ಸ್ವಾಗತ ಕೋರಿದರು. ಮೆಕಾನಿಕಾಲ್ ವಿಭಾಗ ಮುಖ್ಯಸ್ಥ ಡಾ. ಗಿರೀಶ್ ಕುಮಾರ್ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಐಟಿ ಉಜಿರೆ, ಎಸ್‌ಡಿಎಂ ಪಿಜಿ ಸೆಂಟರ್ ಹಾಗೂ ಎಸ್‌ಡಿಎಂ ಪದವಿ ಕಾಲೇಜಿನ ಅಧ್ಯಾಪಕರು ಪಾಲ್ಗೊಂಡರು.

Related posts

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya
error: Content is protected !!