ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ’ಗೆ ಹೋಗುವ ರಸ್ತೆಯು ಸುಮಾರು 3-4 ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇಷ್ಟರವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಈ ರಸ್ತೆಯು ತೀರಾ ಹದಗೆಟ್ಟಿದ್ದು, ಪ್ರಸ್ತುತ ಈ ರಸ್ತೆಯಲ್ಲಿ ಪ್ರಯಾಣಿಸಲು ತುಂಬಾ ಕಷ್ಟದಾಯಕವಾಗಿದೆ. ಮಳೆಗಾಲದಲ್ಲಿ ಜನರು ಬಹಳಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ರಸ್ತೆ ಹಲವಾರು ವಿದ್ಯಾರ್ಥಿಗಳು, ದಿನ ಕೂಲಿ-ಕಾರ್ಮಿಕರು ನಿತ್ಯ ಸಂಚರಿಸುವ ರಸ್ತೆಯಾಗಿರುತ್ತದೆ. ಜೊತೆಗೆ ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಕಾಲನಿಗೆ ಹಾದು ಹೋಗುವ ರಸ್ತೆಯಾಗಿದೆ.
ಆದಷ್ಟು ಶೀಘ್ರವಾಗಿ ಈ ರಸ್ತೆಯನ್ನು ಕಾಂಕ್ರಿಟೀಕರಣಗೊಳಸಿ ಅಭಿವೃದ್ಧಿ ರಸ್ತೆಯನ್ನಾಗಿ ಮಾಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಚಾರ್ಮಾಡಿ ಅಭಿವೃದ್ಧಿ ಅಧಿಕಾರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ, ಉಜಿರೆ ಬ್ಲಾಕ್ ಸಮಿತಿ ಸದಸ್ಯರು ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.











