32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

ಬೆಳ್ತಂಗಡಿ: ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಜು. 24 ರಂದು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಅವರಿಗೆ ವಿವರಿಸಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕಾಗಿ ತಮ್ಮ ಬ್ಯಾಂಕ್ ನ ಸಿಎಸ್.ಆರ್ ನ ಮೂಲಕ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಮತ್ತು ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ, ಅನುಸರಣೆ ಮತ್ತು ಹಣಕಾಸು ವ್ಯವಸ್ಥಾಪಕ ಶ್ರೀ ಮೋಹನ ಎಸ್ ಉಪಸ್ಥಿತರಿದ್ದರು.

Related posts

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya
error: Content is protected !!