September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉಜಿರೆ :ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ.) ಸಂಸ್ಥೆಯಲ್ಲಿ ಇಂದು (ಜು.26) ಕಾರ್ಗಿಲ್ ವಿಜಯ ದಿವಸ್ ಆಚರಣೆ ನಡೆಯಿತು.

ಮುಖ್ಯ ಅತಿಥಿ, ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಎನ್ ಸಿ ಸಿ ಅಧಿಕಾರಿ ಡಾ. ಭಾನುಪ್ರಕಾಶ್ ಬಿ ಇ ಮಾತನಾಡಿ “ ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರು ಹುತಾತ್ಮರಾದ ಕಾರಣ ಭಾರತವು ಈ ದಿನಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತದೆ. ಅವರ ಬಲಿದಾನದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ. ಈ ಯುದ್ಧವು 1999 ಮೇ ತಿಂಗಳಿನಲ್ಲಿ ಆರಂಭವಾಗಿ ಜುಲೈ 26ರವರೆಗೆ ನಡೆದಿದ್ದು, ಯುದ್ಧದಲ್ಲಿ ನಮ್ಮ ದೇಶದ ಗೆಲುವನ್ನು ಸಂಭ್ರಮಿಸುವ ದಿನವೂ ಇದಾಗಿದೆ. ದೇಶದಾದ್ಯಂತ ಕಾರ್ಗಿಲ್‌ ವಿಜಯ ದಿನವನ್ನು ಆಚರಿಸಲಾಗುತ್ತಿದ್ದು, ಈ ವರ್ಷ ಕಾರ್ಗಿಲ್ ವಿಜಯದ 26ನೇ ವರ್ಷವನ್ನೂ ಆಚರಿಸಲಾಗುತ್ತಿದೆ” ಎಂದರು.

“ದೇಶಪ್ರೇಮದೊಂದಿಗೆ ತ್ಯಾಗ ಪ್ರಾಮಾಣಿಕತೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಮಾದರಿ ಶಿಕ್ಷಕರಾಗಿ” ಎಂದು ಅವರು ಶುಭ ಹಾರೈಸಿದರು.

ಪ್ರಾಂಶುಪಾಲ ಡಾ.ಸಂತೋಷ್ ಸಲ್ಡಾನ್ಹ ಅಧ್ಯಕ್ಷತೆ ವಹಿಸಿ ಮಾತನಾಡಿ, “ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರಯೋಧರು ಸದೆಬಡಿದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ಆ ದಿನವನ್ನು, ಶೌರ್ಯದ ನೆನಪಿಗಾಗಿ, ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಭವಿಷ್ಯದಲ್ಲಿ ಶಿಕ್ಷಕರಾಗುವ ನೀವೆಲ್ಲರೂ ದೇಶದ ಸೈನಿಕರನ್ನು ನಿರ್ಮಿಸುವಂತವರಾಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪನ್ಯಾಸಕ ಮಂಜು ಆರ್ ಪ್ರಾಸ್ತವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪ್ರಶಿಕ್ಷಣಾರ್ಥಿಗಳಾದ ರಾಹಿಲ ಮತ್ತು ಬಳಗ ಪ್ರಾರ್ಥಿಸಿ, ರಾಹಿಝ ಸ್ವಾಗತಿಸಿ, ಪೂರ್ಣಿಮಾ ವಂದಿಸಿ, ಜಯಶ್ರೀ ವ್ಯಕ್ತಿ ಪರಿಚಯ ಮಾಡಿದರು. ಸಲ್ವ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!