32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

ಗುರಿಯ ಹಿಂದೆ ಹೋದವರು ಯಶಸ್ವಿಯಾಗುತ್ತಾರೆ. ಹಣ, ಪ್ರತಿಷ್ಠೆಯ ಹಿಂದೆ ಬಿದ್ದವರು ಬದುಕಿನಲ್ಲಿ ಗೆಲ್ಲುವುದಿಲ್ಲ ಎಂದು ಖ್ಯಾತ ಮನೋವಿಶ್ಲೇಷಕ ಮತ್ತು ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಬಾರ್ಯ ಅವರು ಹೇಳಿದರು.


ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ ನ ಸಭಾಂಗಣದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಹಣ ಬಲವೆ ಶ್ರೇಷ್ಠ ಎಂದು ಕಂಡರೂ, ನೈತಿಕತೆಯಿಲ್ಲದ ಹಣ ಗಳಿಕೆಗೆ ಮಾನ್ಯತೆಯಿಲ್ಲ ಎಂದರು.


ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ಮನುಷ್ಯ ಬುದ್ಧಿವಂತ ಜೀವಿ. ಪರಿಶ್ರಮ ಪಟ್ಟರೆ ಮನುಷ್ಯ ಎಷ್ಟು ಉನ್ನತ ಸ್ಥಾನಕ್ಕೂ ಏರ ಬಹುದು. ಮನುಷ್ಯನಿಗೆ ಮಾತ್ರ ದೇವರು ಅನುಗ್ರಹಿಸಿದ ವರ ಇದೆಂದು ಹೇಳಿದರು. ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೀವ ವಿಜ್ಞಾನ ವಿಭಾಗದ ಉಪನ್ಯಾಸಕ ಪ್ರಜ್ವಿತ್ ರೈ ಸ್ವಾಗತಿಸಿದರು.


ನೀಟ್ ಬಗ್ಗೆ ಭೌತ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ ಭಟ್, ಜೆ ಇ ಇ ಬಗ್ಗೆ ಭೌತ ವಿಜ್ಞಾನ ವಿಭಾಗದ ಶ್ರೀನಿಧಿ ರಾಜ್ ಶೆಟ್ಟಿ, ಸಿ ಇ ಟಿ ಬಗ್ಗೆ ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಈಶ್ವರ್ ಶರ್ಮ ಮಾಹಿತಿ ನೀಡಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸುನಿಧಿ ಪ್ರಾರ್ಥಿಸಿದರು. ಸಮಾರಂಭದ ಕೊನೆಯಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು. ಕನ್ನಡ ವಿಭಾಗದ ಮಹಮ್ಮದ್ ಮುನೀರ್ ನಿರೂಪಿಸಿ, ವಂದಿಸಿದರು.

Related posts

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ

Suddi Udaya
error: Content is protected !!