September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪ.ಪೂ. ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ” ಇನ್ಸರ್ ವಿದ್ವತ್’ ಪ್ರಸ್ತುತ ಪಡಿಸಿದ ಪ್ರಥಮ ಪಿ.ಯು ಕಾಮರ್ಸ್ ತರಗತಿಯ ” ಓರಿಯ್‌ಂಟೇಷನ್” ಕಾರ್ಯಕ್ರಮವು ಜು.26ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳ ಕಲಿಕೆಯಲ್ಲಿ ಪೋಷಕರ ಪಾತ್ರವು ಬಹಳ ಮುಖ್ಯವಾಗಿದೆ. ಪೋಷಕರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳ ಬಗ್ಗೆ ಸರಿಯಾದ ಕಾಳಜಿ ವಹಿಸಿದರೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿತ್ತದೆ ಎಂದರು.

ವೇದಿಕೆಯಲ್ಲಿ ಸಂಸ್ಥೆಯ ಟ್ರಸ್ಟಿಗಳಾದ ಕಾಶಿ ಕಾಂಗಿಣ್ಣಾಯ, ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಇ. ಮಂಡಗಳಲೆ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಪ್ರಾಂಶುಪಾಲ ಹರೀಶ್ ಕೆ.ಆರ್. ಉಪಸ್ಥಿತರಿದ್ದರು.ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಮಹಿತಾ ಇವರು “ ಮುಂದಿನ ಶೈಕ್ಷಣಿಕ ವೇಳಾಪಟ್ಟಿ ಹಾಗೂ ಸಿ.ಎ ಮತ್ತು ಕ್ಲಾಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಹೇಗೆ ತಯಾರಿ ಮಾಡಬೇಕೆಂಬುದರ ಬಗ್ಗೆ ಮತ್ತು ವಿದ್ಯಾರ್ಥಿಗಳ ಪ್ರಸ್ತುತ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಇ. ಮಂಡಗಳ ಇವರು “ಪಿ.ಯು.ಸಿ ಯ ನಂತರ ಇರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳ ಬಗ್ಗೆ” ಮಾಹಿತಿ ನೀಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಯನ್ನು ಮಾಡಿರುವ ಹಾಗೂ ಕಾಲೇಜಿನಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮವು ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಕಾಲೇಜಿನ ಕನ್ನಡ ಉಪನ್ಯಾಸಕ ನೀಲಕಂಠ ಇವರು ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕ ಸತೀಶ್ ಬಂಗೇರ ಅತಿಥಿಗಳ ಪರಿಚಯ ಮಾಡಿದರು. ಉಪನ್ಯಾಸಕಿ ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!