ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

ಬೆಳ್ತಂಗಡಿ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ,ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ದಿ. ಪದ್ಮನಾಭ ಮಾಣಿಂಜ ಇವರ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜು‌ 27 ರಂದು ಚುನಾವಣೆ ನಡೆಯಿತು.

ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿ,ಸೊಸೈಟಿಯ ಉಪಾಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಭಗೀರಥ ಜಿ ರವರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಲಯನ್ಸ್ ಕ್ಲಬ್ ನಲ್ಲಿ ವಿಶೇಷ ಸಾಧನೆ ಮಾಡಿ,ಯುವವಾಹನಿ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಜಗದೀಶ್ಚಂದ್ರ ಡಿ.ಕೆ ರವರು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣೆ ಪ್ರಕ್ರಿಯೆಯನ್ನು ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಬಿ.ವಿ.ಪ್ರತಿಮಾರವರು ನಡೆಸಿಕೊಟ್ಟಿರುತ್ತಾರೆ.

ಈ‌ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ತನುಜಾ ಶೇಖರ್,ಚಂದ್ರಶೇಖರ್,ಸಂಜೀವ ಪೂಜಾರಿ,ಕೆ.ಪಿ ದಿವಾಕರ, ಧರ್ಣಪ್ಪ ಪೂಜಾರಿ,ಧರಣೇಂದ್ರ ಕುಮಾರ್,ಜಯವಿಕ್ರಮ್ ಪಿ,ಆನಂದ ಪೂಜಾರಿ,ಡಾ‌.ರಾಜಾರಾಮ ಕೆ.ಬಿ,ಗಂಗಾಧರ ಮಿತ್ತಮಾರ್,ರಕ್ಷಿತ್ ಶಿವರಾಮ್,ಚಿದಾನಂದ ಪೂಜಾರಿ,ಸೂರಜ್ ಕುಮಾರ್,ವಿಶೇಷಾಧಿಕಾರಿ ಮೋನಪ್ಪ ಪೂಜಾರಿ,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!