September 6, 2026
ಗ್ರಾಮಾಂತರ ಸುದ್ದಿ

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ CPR (Cardio Pulmonary Resuscitation) ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮವು ಜು. 27ರಂದು ಸೈಂಟ್ ಸಬಾಸ್ಟಿಯನ್ ಚರ್ಚ್ ನಲ್ಲಿ ನಡೆಸಲಾಯಿತು.


ಸಂಘದ ಅಧ್ಯಕ್ಷರಾದ ಅಗಸ್ಟೀನ್ ಟಿ.ಎ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ರೆ. ಫಾ. ಸುನಿಲ್ ಪೂವತಿಂಗಲ್ ಆಗಮಿಸಿದ್ದರು.
ತರಬೇತಿಯನ್ನು ನೀಡಲು ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ನರ್ಸಿಂಗ್ ಸೂಪರಿಟೆಂಡೆಂಟ್ ಶ್ರೀಮತಿ ಶೆರ್ಲಿ ಮತ್ತು ಅವರ ವೈದ್ಯಕೀಯ ತಂಡ ಹಾಜರಿದ್ದರು. ಅವರು ಜನರಿಗೆ CPR ತಂತ್ರಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ, ಪ್ರಾಯೋಗಿಕವಾಗಿ ತರಬೇತಿಯನ್ನು ನೀಡಿದರು.
ಸಂಘದ ಕಾರ್ಯದರ್ಶಿ ಶಿಜೋ ಜೋಸೆಫ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಉಪಾಧ್ಯಕ್ಷರಾದ ಮ್ಯಾಥ್ಯೂ ವಿ ಟಿ, ಕೋಶಾಧಿಕಾರಿ ರಂಜಿತ್ ಪಿ ಎಸ್, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿ ಮಾಹಿತಿ ಮತ್ತು ತರಬೇತಿಯನ್ನು ಪಡೆದುಕೊಂಡರು.
ಈ ಕಾರ್ಯಕ್ರಮ ಜನಜಾಗೃತಿ ಮೂಡಿಸಲು ಮತ್ತು ತುರ್ತು ಪರಿಸ್ಥಿತಿಯಲ್ಲಿ ಜೀವ ಉಳಿಸಲು ಅತ್ಯಂತ ಪರಿಣಾಮಕಾರಿಯಾಗಿ ನೆರವಾಯಿತು.

Related posts

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya
error: Content is protected !!