March 7, 2026
ಶಾಲಾ ಕಾಲೇಜು

ಸರಸ್ವತಿ ಆಂಗ್ಲ ಮಾಧ್ಯಮಶಾಲೆ ಮುಂಡಾಜೆಯಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ.


ಮುಂಡಾಜೆ :ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆ ಗಳಲ್ಲಿ ಒಂದಾದ ಸರಸ್ವತಿ ಆಂಗ್ಲ ಮಾಧ್ಯಮ ದಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಜು. 27ರಂದು ಹಮ್ಮಿಕೊಳ್ಳಲಾಯಿತು.

ವಿವೇಕಾನಂದವಿದ್ಯಾವರ್ಧಕ ಸಂಘದ ಅಧ್ಯಕ್ಷರು ಆಗಿರುವ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಸಭೆಯ ಅಧ್ಯಕ್ಷರಾಗಿದ್ದು ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ಪೋಷಕರೊಂದಿಗೆ ಮಾತನಾಡಿ ಮಕ್ಕಳಿಗೆ ವಿದ್ಯಾಭ್ಯಾಸ ದ ಜೊತೆಗೆ ಸಂಸ್ಕಾರ ಕೂಡ ಬಹಳ ಮುಖ್ಯ ಎಂದರು. ಕಳೆದ ಶೈಕ್ಷಣಿಕ ಸಾಲಿ ನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಯಾದ ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಪುರ ಸ್ಕರಿಸಲಾಯಿತು. ವೇದಿಕೆಯಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಶ್ರೀ ವಿನಯ ಚಂದ್ರ ಶ್ರೀಮಾನ್, ಮುಖ್ಯ ಮಾತಾಜಿ ಶ್ರೀಮತಿ ಚಂದ್ರಮತಿ, ಹಿರಿಯ ಮಾತಾಜಿ ಶ್ರೀಮತಿ ಶ್ರೀಜಾ ಉಪಸ್ಥಿತರಿದ್ದರು. ಮುಖ್ಯ ಮಾತಾಜಿ ಸ್ವಾಗತಿಸಿದರು. ನಿರ್ಮಿತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾವತಿ ಮಾತಾಜಿಯ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.

Related posts

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!