22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯು, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಸಹಕಾರದೊಂದಿಗೆ, ಬೆಳ್ತಂಗಡಿ ಯಕ್ಷ ಸಂಭ್ರಮ ಸಹಯೋಗದೊಂದಿಗೆ “ಮಹಿಳಾ ಯಕ್ಷ ಸಂಭ್ರಮ” ಆಗಸ್ಟ್ 2 & 3ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸದಸ್ಯರಾದ ದಯಾನಂದ ಪಿ. ಬೆಳಾಲು ತಿಳಿಸಿದರು.

ಅವರು ಜು.28 ರಂದು ಉಜಿರೆ ರಾಮಕೃಷ್ಣ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆ.2ರಂದು ಬೆಳಿಗ್ಗೆ 10ರಿಂದ ಪೂರ್ವರಂಗ, ಅಬ್ಬರದ ಚೆಂಡೆ, 11:30 ರಿಂದ ಉದ್ಘಾಟನ ಸಮಾರಂಭ ನಡೆಯಲಿದ್ದು ದೀಪ ಪ್ರಜ್ವಲನೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಯು. ಶರತ್ ಕೃಷ್ಣ ಪಡ್ವೆಟ್ನಾಯ ನೆರವೇರಿಸಲಿರುವರು. ಬೆಂಗಳೂರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಲಿರುವರು. ಅತಿಥಿಗಳಾಗಿ ವಿಧಾನಪರಿಷತ್‌ ಮಾಜಿ ಸದಸ್ಯ ಹರೀಶ್ ಕುಮಾರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಶ್ರೀಮತಿ ಪುಷ್ಪಾ ಅಮರನಾಥ್, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಶ್ರೀಮತಿ ಪ್ರತಿಭಾ ಕುಳಾಯಿ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆಶ್ರೀಮತಿ ಉಷಾಕಿರಣ್ ಕಾರಂತ, ಯಕ್ಷಗಾನ ಸಂಘಟಕರು ಭುಜಬಲಿ ಧರ್ಮಸ್ಥಳ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಉಪಾಧ್ಯಕ್ಷರು ಶೇಖರ್ ಕುಕ್ಕೇಡಿ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕೆ. ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಪದ್ಮನಾಭ ಸಾಲಿಯಾನ್, ಕೆ.ಪಿ.ಸಿ.ಸಿ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ನಮಿತಾ ಭಾಗವಹಿಸುವರು. ಮಧ್ಯಾಹ್ನ ಬಡಗುತಿಟ್ಟು- ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ಜರಗಲಿರುವುದು.

ಆ.3 ರಂದು ಬೆಳಗ್ಗೆ ಮಹಿಳೆ ಮತ್ತು ತಾಳಮದ್ದಳೆ ಸಂಘಟನೆ, ಯಕ್ಷಗಾನ-ಸ್ತ್ರೀ ಅಭಿವ್ಯಕ್ತಿಯ ಹೊಸ ಸಾಧ್ಯತೆಗಳು, ಯಕ್ಷಗಾನ ಕಲಾವಿದರ ಪರಿವಾರದ ಮಹಿಳೆಯರು ವಿಚಾರದ ಬಗ್ಗೆ ವಿಚಾರ ಗೋಷ್ಠಿ, ಮೂಡಲಪಾಯ ಯಕ್ಷಗಾನ ಪ್ರದರ್ಶನ, ತಾಳಮದ್ದಳೆ, ಉದಯನ್ನೋಖ ಮಹಿಳಾ ಭಾಗವತರ ಕೂಡುವಿಕೆಯಿಂದ ಗಾನವೈಭವ ನಡೆಯಲಿದೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌, ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಸತೀಶ್ ಕಾಶಿಪಟ್ನ, ಉಜಿರೆ ಗ್ರಾಮ ಪಂಚಾಯಿತ್ ಉಪಾಧ್ಯಕ್ಷರು ರವಿ ಬರಮೇಲು, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟದ ಶ್ರೀಮತಿ ವಿನುತಾ ರಜತ್ ಗೌಡ ಭಾಗವಹಿಸಲಿರುವ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶರತ್ ಕೃಷ್ಣ ಪಡ್ವೆಟ್ನಾಯ, ಉದ್ಯಮಿ ಮೋಹನ್ ಶೆಟ್ಟಿಗಾರ್, ಬೆಳ್ತಂಗಡಿ ನಗರ ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ, ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟದ ವಿನುತಾ ರಜತ್ ಗೌಡ ಉಪಸ್ಥಿತರಿದ್ದರು.

Related posts

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!