ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಸ್ಥಳ ಮಹಜರು ನಡೆಸಲಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆಸಿಕೊಂಡಿದ್ದು ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದಲ್ಲಿ ಬುರುಡೆ ತೆಗೆದ ಜಾಗಕ್ಕೆ ಹೋಗಿ ಮಹಜರು ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.


ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯ ಮುಂದೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ.
FSL ತಂಡ ಕೂಡ ಆಗಮಿಸಿದ್ದು, ಕಂದಾಯ ಇಲಾಖೆ,ಸರ್ವೆ ಇಲಾಖೆ, ಐ.ಎಸ್.ಡಿ(ಅಂತರಿಕ ಭದ್ರತಾ ವಿಭಾಗ,ಎಫ್.ಎಸ್.ಲ್ ವಿಭಾಗದ ಸೋಕೋ ಸಿಬ್ಬಂದಿ,ಅರಣ್ಯ ಇಲಾಖೆ ತಂಡ ಕೂಡಾ ಆಗಮಿಸಿದ್ದಾರೆ.











