25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

ಪುಂಜಾಲಕಟ್ಟೆ : ಶ್ರೀ ಕ್ಷೇ ಧ ಗ್ರಾ, ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಮಡಂತ್ಯಾರು ಶೌರ್ಯ ವಿಪತ್ತು ಘಟಕದಿಂದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ ಮಾಡಲಾಯಿತು.

ಕಾರ್ಯಕ್ರಮ ಮಡಂತ್ಯಾರು ರೋಟರಿ ಕ್ಲಬ್ ನ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕ ದ ಸ್ವಯಂ ಸೇವಕರು ಭಾಗವಹಿಸಿ ರೋಟರಿ ಕ್ಲಬ್ ನ ಅಧ್ಯಕ್ಷ ಮೆಕ್ಸಿಂ ಅಲ್ಬುಕರ್ಕ್, ಕಾಂತಪ್ಪ ಗೌಡ, ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನಿತಾ ಬರೋಟ್ಟ, ಕಾರ್ಯಕ್ಷೇತ್ರ ದ ಸೇವಾ ಪ್ರತಿನಿಧಿ ಶ್ರೀಮತಿ ಭಾರತಿ, ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕರಾದ ಭರತ್ ಕುಮಾರ್, ದೀಪಕ್ ಹಾರಬೆ, ಪುರುಷೋತ್ತಮ ಪುಂಜಾಲಕಟ್ಟೆ, ಯೋಗೀಶ್ ಕುಮಾರ್, ಸುಜೀತ್ ಕುಮಾರ್, ಶ್ರೀಮತಿ ರಾಜೇಶ್ವರಿ, ಶ್ರೀಮತಿ ಶಕುಂತಳಾ, ಸತೀಶ್ ಆಚಾರ್ಯ ಶ್ರಮದಾನದಲ್ಲಿ ಸಹಕರಿಸಿದರು.

Related posts

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya
error: Content is protected !!