32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ಯುದ್ಧದ ರಜತ ಮಹೋತ್ಸವದ ನೆನಪಿಗಾಗಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ ಜರಗಿತು.

ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ನಿವೃತ್ತ ಸೈನಿಕ ಜನಾರ್ದನ ಕೆ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸೈನ್ಯ ಹಾಗೂ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯಲ್ಲಿ ಸೇವಾ ಅನುಭವಗಳನ್ನು ಹಂಚಿಕೊಂಡರು ಮತ್ತು ಭಾರತೀಯ ಸೇನೆಗೆ ತಾಂತ್ರಿಕ ವಿಭಾಗದಲ್ಲಿ ಸೇರಲು ಬೇಕಾದ ಮಾಹಿತಿಯನ್ನು ನೀಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಶುಭಹಾರೈಸಿದರು. ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ , ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವನ್ನು ಸ್ವಯಂಸೇವಕಿ ಮಂಜುಷ ಸ್ವಾಗತಿಸಿ, ಅಭಿಜ್ಞಾ ವಂದಿಸಿದರು. ಸ್ವಯಂ ಸೇವಕಿ ಭವಿತಾ ನಿರೂಪಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!