ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಮುಂಜಾನೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ.

ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ನಡೆದಿದೆ.ಬಳಿಕ ಆನೆ ಕಾಡಿನತ್ತ ಸಂಚರಿಸಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ.

ಕಳೆದ ಎರಡು ವಾರಗಳ ಹಿಂದೆಯಷ್ಟೆ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕಾಡಾನೆ ದಾಳಿ ಮಾಡಿ ಕೊಂದಿರುವ ನಡುವೆಯೇ ಈ ಘಟನೆ ಸಂಭವಿಸಿರುವುದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಎಡೆಮಾಡಿದೆ.ಬೆಳ್ತಂಗಡಿ ವ್ಯಾಪ್ತಿಯಲ್ಲಿ ನಿರಂತರ ದಾಳಿಯಿಂದ ಕೃಷಿಕರು ನಷ್ಟ ಅನುಭವಿಸಿರುವ ಮಧ್ಯೆಯೇ, ಕಾಡಾನೆಗಳು ಮಾನವನ ಮೇಲೆ ಎರಗಲು ಆರಂಭಿಸಿದೆ. ಇದರಿಂದ ಮುಂಜಾನೆ ಶಾಲಾ ಮಕ್ಕಳು, ಹೈನುಗಾರರು ಜೀವಭಯದಲ್ಲಿ ಸಂಚರಿಸುವಂತಾಗಿದೆ.

Related posts

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya
error: Content is protected !!