25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ : ‘ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಹೊಂದಿ ಸಮಾಜದ ಪ್ರಬುದ್ಧ ನಾಗರಿಕರಾಗಿ ಬೆಳೆಯಬೇಕು. ಶಿಕ್ಷಣದ ಪದವಿ ಜತೆ ಜೀವನದ ಶ್ರೇಷ್ಠ ಪದವಿಯನ್ನು ಪಡೆಯಬೇಕು’ ಎಂದು ಮುಂಡಾಜೆ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಜಾಲಿ ಓ. ಎ. ಹೇಳಿದರು.

ಅವರು ಜು.28 ರಂದು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 2025 – 2026 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

‘ಬಹುತೇಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪದವಿ ಶಿಕ್ಷಣ ಮುಖ್ಯ. ಪದವಿಯ ಜತೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಸಮಯ ವ್ಯರ್ಥ ಮಾಡದೆ ತಯಾರಿ ಮಾಡಬೇಕು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಬದುಕಿನ ಹಂಬಲ ಸದಾ ಇರಬೇಕು. ವಿದ್ಯಾರ್ಥಿಗಳಿಗೆ ಶಿಕ್ಷೆ ಕೊಡುವಂತಹುದು ವ್ಯಕ್ತಿತ್ವ ಬದಲಾಯಿಸಲು. ಅದನ್ನು ಅರ್ಥೈಸಿಕೊಂಡು ತಿದ್ದಿಕೊಳ್ಳುವ ಗುಣ ಸದಾ ಬೆಳೆಸಿಕೊಳ್ಳಬೇಕು’ ಎಂದರು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಲೇಜಿನ ನಿಯಮಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ವೇದಿಕೆಯಲ್ಲಿ ಶ್ರೀ ಗುರುದೇವ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್, ಉಪಾಧ್ಯಕ್ಷೆ ಖುಷಿ, ಕಾರ್ಯದರ್ಶಿ ದಿಯಾ, ಜತೆ ಕಾರ್ಯದರ್ಶಿ ಫಾತಿಮತ್ ರಫಾ ಇದ್ದರು.

ದ್ವಿತೀಯ ವಿಜ್ಞಾನ ವಿಭಾಗದ ದೀಪಕ್, ದ್ವಿತೀಯ ವಾಣಿಜ್ಯ ವಿಭಾಗದ ಖುಷಿ, ದ್ವಿತೀಯ ಕಲಾ ವಿಭಾಗದ ದಿಯಾ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಸಾನಿಕ, ಪವನ್, ಪ್ರಥಮ ವಾಣಿಜ್ಯ ವಿಭಾಗದ ಅಕ್ಷಯ್ ಅನಿಸಿಕೆ ವ್ಯಕ್ತಪಡಿಸಿದರು.

ಷಷ್ಟ್ಯಬ್ಧ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಕಾಲೇಜಿನ ಕಚೇರಿ ಸಿಬ್ಬಂದಿ ಜನಾರ್ದನ ಬಿ ಇವರನ್ನು ಗೌರವಿಸಲಾಯಿತು.

ಕಾಲೇಜಿನ ಉಪ ಪ್ರಾಂಶುಪಾಲ ಶಮೀವುಲ್ಲಾ ಪ್ರಸ್ತಾವಿಸಿ ಸ್ವಾಗತಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಸೌಜನ್ಯ ಹಾಗೂ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಚಂದನಾ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು, ರಾಕೇಶ್ ಕುಮಾರ್ ಇವರು ಪರಿಚಯಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅಶ್ವಿನಿ ವಂದಿಸಿದರು.

Related posts

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya
error: Content is protected !!