23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ : ನಾಗರ ಪಂಚಮಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳಿಗೆ ಉಚಿತವಾಗಿ ಹಾಲು , ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಬಗ್ಗೆ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು ದೇಶದಲ್ಲಿ 28 ಕೋಟಿ ಜನರು ಒಂದು ತೊಟ್ಟು ಹಾಲು ಖರೀದಿಸಲು ಸಾಧ್ಯವಿಲ್ಲದೆ ಜೀವಿಸುತ್ತಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಅಪೌಷ್ಟಿಕತೆಯ ಕೊರತೆಯಿಂದ ಮಕ್ಕಳು , ಮಹಿಳೆಯರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಾವು ನಾಗರ ಪಂಚಮಿ ಹೆಸರಿನಲ್ಲಿ ಕಲ್ಲಿಗೆ , ಹುತ್ತಗಳಿಗೆ ಹಾಲು ಚೆಲ್ಲುವ ಮೂಲಕ ದುರುಪಯೋಗ ಮಾಡುತ್ತೇವೆ. ಅದರ ಬದಲಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ , ರೋಗಿಗಳಿಗೆ ನೀಡಿದರೆ ಉತ್ತಮ. ರೆಡ್ ಕ್ರಾಸ್ ಸೊಸೈಟಿ ಇಡೀ ಜಗತ್ತಿನಾದ್ಯಂತ ಅಪೌಷ್ಟಿಕತೆಯ ವಿರುದ್ಧ ಸಮರ ಸಾರಿದ್ದು , ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ರೋಗಿಗಳಿಗೆ ಹಾಲು , ಹಣ್ಣುಹಂಪಲು ವಿತರಣೆ ಮಾಡಲಾಯಿತು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಕೆ , ಹಿರಿಯ ಸುಶ್ರುಕ್ರಿ ಪೊನ್ನಮ್ಮ , ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಜೋನ್ ಅರ್ವಿನ್ ಡಿಸೋಜ , ನಿರ್ದೇಶಕಿ ನ್ಯಾಯವಾದಿ ಸುಕನ್ಯಾ ಹೆಚ್ , ಸದಸ್ಯ ಶೇಖರ್ ಲಾಯಿಲ , ಎಕೆಜಿ ಸೊಸೈಟಿ ಸಿಬ್ಬಂದಿಗಳಾದ ಸಂಜೀವ ಆರ್ , ಕು. ಕೀರ್ತನಾ ಉಪಸ್ಥಿತರಿದ್ದರು .

Related posts

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya
error: Content is protected !!