March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ಜೋಸೆಫ್ ಎನ್ ಎಂ ಇವರು ಸಂಪನ್ಮೂಲ ವ್ಯಕ್ತಿಗಳಾಗಿದ್ದು ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದಲ್ಲಿ ಮೌಲ್ಯವರ್ಧನೆಯ ಬಗ್ಗೆ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರು ಪ್ರೊ. ಸುರೇಶ್ ವಿ ಅಧ್ಯಕ್ಷತೆಯನ್ನು ವಹಿಸಿದ್ದು ವಿದ್ಯಾರ್ಥಿಗಳಿಗೆ ಕಾಲೇಜಿನ ಎಲ್ಲಾ ನೀತಿ ನಿಯಮಗಳನ್ನು ವಿವರಿಸಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಪರಿಚಯಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ, ದೈಹಿಕ ಶಿಕ್ಷಣದ ಬಗ್ಗೆ, ಪ್ರೊ. ರಶ್ಮಿ, ಉದ್ಯೋಗ ಮಾಹಿತಿ ಕೋಶದ ಬಗ್ಗೆ, ಡಾ| ರವಿ ಎಂ ಎನ್ ಕಾಲೇಜಿನಲ್ಲಿ ಹೊಸದಾಗಿ ಪ್ರಾರಂಭಿಸಿದ AEDP(ಬಿಕಾಂ) ಪದವಿ ತರಗತಿಗಳ ಬಗ್ಗೆ, ಶ್ರೀಮತಿ ದಿವ್ಯ ರಾಜ್ ಕಚೇರಿ ವಿಷಯಗಳ ಬಗ್ಗೆ, ಮತ್ತು ಡಾ. ಕುಶಾಲಪ್ಪ IQAC ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಡಾ. ರಾಜೇಶ್ವರಿ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಹರ್ಷಿತ ಮತ್ತು ತಂಡದ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಪ್ರೊ. ನವೀನ್ ವಂದಿಸಿದರು ಮತ್ತು ಪ್ರೊ. ಮಾರುತಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!