ಬೆಳ್ತಂಗಡಿ: ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿ, ತಾಲೂಕು ಪಂಚಾಯತ್, ಬೆಳ್ತಂಗಡಿ ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇವುಗಳ ಸಹಯೋಗದಲ್ಲಿ ಆ.04 ರಂದು ಪೂರ್ವಾಹ್ನ:10.00 ಗಂಟೆಯಿಂದ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ, ಅಂಚೆ ಇಲಾಖೆಯ ವಿಶೇಷ ಸೇವಾ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಆರೋಗ್ಯ ಮತ್ತು ಅಪಘಾತ ವಿಮಾ ಶಿಬಿರವನ್ನು ಏರ್ಪಡಿಸಲಾಗಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್ ಮತ್ತು ಭಾರತೀಯ ಅಂಚೆ ಕಛೇರಿ, ಪುತ್ತೂರು ವಿಭಾಗದ ಮಾರ್ಕೇಟಿಂಗ್ ಮ್ಯಾನೇಜರ್ ಗುರುಪ್ರಸಾದ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






