September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

ಬೆಳ್ತಂಗಡಿ, ಜು.29: ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಹೆಣಗಳ ಕಳೆಬರ ಹೊರತೆಗೆಯುವ ಕಾರ್ಯಾಚರಣೆಗೆ ಎಸ್.ಐ.ಟಿ. ತಂಡದದಿಗೆ ವೈದ್ಯರ ತಂಡ ಜತೆಯಾಗಿದೆ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅಧಿಕಾರಿಗಳು ಮುಂಜಾನೆಯೇ ಹಾಜರಾಗಿದ್ದರು. ಈ ವೇಳೆ ಮಂಗಳೂರು ಕೆಎಂಸಿ ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಸಭೆ ನಡೆದು ಬಳಿಕ ಸೋಮವಾರ ಸಾಕ್ಷಿ ಗುರುತಿಸಿ ನೇತ್ರಾವತಿ ಸ್ನಾನ ಘಟ್ಟದಲ್ಲಿರುವ ಮೊದಲ ಸ್ಥಳದಲ್ಲಿ ಇರುವ ಮೃತದೇಹದ ಅವಶೇಷ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ನಡೆಸಲಾಗುತ್ತಿದೆ.ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಪುತ್ತೂರು ವಿಭಾಗ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸಹಿತ ಕಂದಾಯ, ಅರಣ್ಯ, ಎಫ್.ಎಸ್.ಎಲ್.ನ ಸೋಕೋ ವಿಭಾಗ, ಎ.ಎನ್.ಎಫ್., ಆಂತರಿಕ ಭದ್ರತಾ ದಳ, ಪೊಲೀಸ್ ತಂಡದ ನೇತೃತ್ವದಲ್ಲಿ ಕಾರ್ಯಾಚರಣೆಗೆ ಅಣಿಯಾಗಿದ್ದಾರೆ.

Related posts

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya
error: Content is protected !!