September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೆಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!