25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಮತ್ತು ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರ ಪರಿಕಲ್ಪನೆ ಯಲ್ಲಿ ಬದುಕು ಕಟ್ಟೋಣ ಬನ್ನಿ ತಂಡ ಕಳೆದ ಹಲವು ವರುಷಗಳಿಂದ “ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ” ಎಂಬ ಕಾರ್ಯಕ್ರಮದಡಿ ಹಲವಾರು ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿ ಹಸ್ತಾಂತರಿಸಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆಧುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಪೂಜ್ಯ ಖಾವಂದರು ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 110 ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಯೋಜನೆ ಮಂಜೂರುಗೊಳಿಸಿದ್ದು ನಮ್ಮ ಈ ಕಾರ್ಯಕ್ರಮಗಳಿಗೆ ಪ್ರೇರಣೆಯಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಶಾಲೆ, ಕಾಲೇಜು, ವೈದ್ಯಕೀಯ, ತಾಂತ್ರಿಕ ಮಹಾವಿದ್ಯಾಲಯ, ತರಭೇತಿ ಕೇಂದ್ರಗಳು, ವಸತಿ ನಿಲಯ, ಗುರುಕುಲಗಳನ್ನು ರಾಜ್ಯಾದ್ಯಂತ ಸ್ಥಾಪಿಸಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪರ್ವವನ್ನು ಸ್ಥಾಪಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಭವಿಷ್ಯಕ್ಕೆ ದಾರಿದೀಪವಾಗಿದ್ದಾರೆ. ಈ ಸಂದರ್ಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸರ್ವ ಸದಸ್ಯರ ಪರವಾಗಿ ಪೂಜ್ಯರಿಗೆ ಭಕ್ತಿಪೂರ್ವಕ ಕೃತಜ್ಞತೆಗಳನ್ನು ಅರ್ಪಿಸುತ್ತಿದ್ದೇನೆ ಎಂದು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ನ ಸಂಚಾಲಕ ಮೋಹನ್ ಕುಮಾರ್ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya
error: Content is protected !!