September 6, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಸುಮಾರು ೩೨ ವರ್ಷಗಳ ಕಾಲ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಲಕ್ಷ್ಮೀನಾರಾಯಣ ಅವರು ಜು.೩೧ಕ್ಕೆ ಸೇವೆಯಿಂದ ನಿವೃತ್ತಿಹೊಂದಿದ್ದು ಅವರಿಗೆ ಪಟ್ಟಣ ಪಂಚಾಯತು ವತಿಯಿಂದ ಗೌರವಾರ್ಪಣೆ ಹಾಗೂ ಬೀಳ್ಕೋಡುಗೆ ಕಾರ್ಯಕ್ರಮ ಜು.೩೧ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು ನಿವೃತ್ತರಾದ ಲಕ್ಷ್ಮೀನಾರಾಯಣ ಅವರನ್ನು ಪಂಚಾಯತು ವತಿಯಿಂದ ಪೇಟಾ ತೋಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿ ಲಕ್ಷ್ಮೀನಾರಾಯಣ ಅವರ ಸಾಧನೆ ಹಾಗೂ ಕೆಲಸದಲ್ಲಿ ಪ್ರಾಮಾಣಿಕತೆ, ಸೇವಾ ನಿಷ್ಠತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿದರು. ಹಿರಿಯ ಸದಸ್ಯ ಜಗದೀಶ್ ಡಿ, ಇಂಜಿನಿಯರ್ ಮಹಾವೀರ್ ಮಾನತಾಡಿ ನಿವೃತರ ಸೇವಾ ಕಾರ್ಯಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ಮುಖ್ಯಾಧಿಕಾರಿ ರಾಜೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಗೌರಿ, ಸದಸ್ಯರಾದ ಅಂಬರೀಶ್, ತುಳಸಿ, ಜನಾರ್ದನ್ ಕುಲಾಲ್, ಲೋಕೇಶ್ ನಾಯ್ಕ, ನಾಮನಿರ್ದೇಶನ ಸದಸ್ಯರಾದ ಹೆನ್ರಿಲೋಬೋ, ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya
error: Content is protected !!